Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದ್ದರಿಂದ ಶತ್ರುಗಳು ಅವರನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:3
10 ತಿಳಿವುಗಳ ಹೋಲಿಕೆ  

ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.


ಅಂಥವರು ತಾವು ಮೊದಲು ಕೊಟ್ಟ ಭರವಸಕ್ಕೆ ತಪ್ಪಿದರೆಂಬ ಅವಮಾನಕ್ಕೊಳಗಾಗಿದ್ದಾರೆ.


ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು; ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಅವನ ಬಾಯಿಂದ ಕೆಡುಕೂ ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ ಪರಹಿತವನ್ನೂ ಬಿಟ್ಟೇ ಬಿಟ್ಟಿದ್ದಾನೆ.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;


ಅವರು ನನ್ನನ್ನು - ನಮ್ಮ ದೇವರೇ, ಇಸ್ರಾಯೇಲ್ಯರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ ಎಂದು ಕೂಗಿಕೊಳ್ಳುವರು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು