Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:4
20 ತಿಳಿವುಗಳ ಹೋಲಿಕೆ  

ಈಗ ಎಫ್ರಾಯೀಮ್ಯರು ಹೆಚ್ಚೆಚ್ಚಾಗಿ ಪಾಪಮಾಡುತ್ತಾರೆ, ತಮ್ಮ ಬೆಳ್ಳಿಯಿಂದ ಸ್ವಬುದ್ಧಿಗೆ ತಕ್ಕ ಎರಕದ ಬೊಂಬೆಗಳನ್ನು ರೂಪಿಸಿಕೊಂಡಿದ್ದಾರೆ; ಅವೆಲ್ಲಾ ಶಿಲ್ಪಿಗಳ ಕೈಕೆಲಸವೇ; ಇಂಥವುಗಳನ್ನು ಮಾತಾಡಿಸುತ್ತಾರೆ, ಮನುಷ್ಯರಾದ ಪೂಜಾರಿಗಳು ಪಶುವಿನ ಮೂರ್ತಿಗಳನ್ನು ಮುದ್ದಿಸುತ್ತಾರೆ.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?


ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.


ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.


ಆತನು - ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.


ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)


ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು.


ಇಸ್ರಾಯೇಲ್ಯರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ಪೂರ್ವದಲ್ಲಿ ಎಫ್ರಾಯೀಮು ನುಡಿದ ಮಾತಿಗೆ ಎಲ್ಲರೂ ನಡುಗಿದರು, ಅದು ಇಸ್ರಾಯೇಲಿನಲ್ಲಿ ಉನ್ನತಸ್ಥಿತಿಗೆ ಬಂದಿತ್ತು; ಆದರೆ ಬಾಳ್‍ದೇವತೆಯ ವಿಷಯದಲ್ಲಿ ದೋಷಿಯಾದಾಗ ಸತ್ತಿತು.


ನಾನು ಕೋಪಗೊಂಡು ರಾಜರನ್ನು ಕೊಟ್ಟಿದ್ದೇನೆ; ಕೋಪೋದ್ರೇಕನಾಗಿ ತೆಗೆದುಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು