ಹೋಶೇಯ 8:7 - ಕನ್ನಡ ಸತ್ಯವೇದವು J.V. (BSI)7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ. ಅಧ್ಯಾಯವನ್ನು ನೋಡಿ |