Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:9 - ಕನ್ನಡ ಸತ್ಯವೇದವು J.V. (BSI)

9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ; ಎಫ್ರಾಯೀಮು ಹಣತೆತ್ತು ವಿುಂಡರನ್ನು ಸಂಪಾದಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:9
13 ತಿಳಿವುಗಳ ಹೋಲಿಕೆ  

ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು