ಹೋಶೇಯ 9:15 - ಕನ್ನಡ ಸತ್ಯವೇದವು J.V. (BSI)15 ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ಅವರನ್ನು ಹಗೆ ಮಾಡಿದ್ದೇನೆ. ಅವರ ಪಾಪ ಕೃತ್ಯಗಳ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ, ಅವರನ್ನು ಇನ್ನು ಪ್ರೀತಿಸುವುದೇ ಇಲ್ಲ. ಅವರ ಅಧಿಕಾರಿಗಳೆಲ್ಲಾ ತಿರುಗಿ ಬೀಳುವವರೇ. ಅಧ್ಯಾಯವನ್ನು ನೋಡಿ |