Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:16 - ಕನ್ನಡ ಸತ್ಯವೇದವು J.V. (BSI)

16 ಎಪ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ; ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:16
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತುಬಂದವು.


ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು