Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:6 - ಕನ್ನಡ ಸತ್ಯವೇದವು J.V. (BSI)

6 ಆಹಾ, ಅವರು ಹಾಳಾದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಶ್ಮಶಾನವಾಗುವದು, ಮೋಫ್ ಪಟ್ಟಣವು ಅವರನ್ನು ಹೂಣಿಡುವದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಶತ್ರುಗಳು ಇಸ್ರೇಲರಿಂದ ಎಲ್ಲವನ್ನು ದೋಚಿಕೊಂಡು ಹೋದುದರಿಂದ ಇಸ್ರೇಲರು ಬಿಟ್ಟು ಹೊರಟರು. ಈಜಿಪ್ಟ್ ಅವರನ್ನು ಒಟ್ಟಿಗೆ ಸೇರಿಸಿಕೊಳ್ಳುವುದು. ಮೆಂಫಿಸ್ ಪಟ್ಟಣವು ಅವರನ್ನು ಹೂಳಿಡುವದು. ಅವರ ಬೆಳ್ಳಿಯ ನಿಕ್ಷೇಪದ ಮೇಲೆ ಕಳೆ ಬೆಳೆಯುವದು. ಇಸ್ರೇಲರು ವಾಸಿಸಿದ್ದಲ್ಲಿ ಮುಳ್ಳಿನ ಗಿಡಗಳು ಬೆಳೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:6
32 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ಮೇಲಕ್ಕೆ ಮಾತ್ರ ತಿರುಗಿಕೊಳ್ಳುವದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ; ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿವಿುತ್ತ ಖಡ್ಗಹತರಾಗಿ ಬೀಳುವರು; ಅವರ ಪತನವು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವದು.


ಆಗ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ ಮುಳ್ಳುಗಿಳ್ಳು ಮುಚ್ಚಿಕೊಂಡು ಹೋಗುವದು.


ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.


ನನ್ನ ಜನರ ಭೂವಿುಯ ಮೇಲೂ ಉತ್ಸಾಹಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆಗಳ ಮೇಲೂ ಮುಳ್ಳುಗಿಳ್ಳು ಹತ್ತಿಕೊಳ್ಳುವದು;


ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.


ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.


ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನೋಫಿನ ಬೊಂಬೆಗಿಂಬೆಗಳನ್ನೆಲ್ಲ ಒಡೆದು ಕೊನೆಗಾಣಿಸುವೆನು; ಐಗುಪ್ತದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣಸಂಕಟಪಡುವದು; ನೋಪುರವು ಭಂಗಕ್ಕೆ ಈಡಾಗುವದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ಬೇಕುಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಒರಳ ಕೇರಿಯವರೇ, ಕಿರಚಿರಿ, ಎಲ್ಲಾ ಸಾಹುಕಾರರು ಹಾಳಾದರು, ಹೊರೆಬೆಳ್ಳಿಯವರೆಲ್ಲರು ನಾಶವಾದರು.


ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.


ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು