1 ಅರಸುಗಳು 1:13 - ಕನ್ನಡ ಸಮಕಾಲಿಕ ಅನುವಾದ13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು; ಅವನೇ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು ಎಂದು ತನ್ನ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದನಲ್ಲಾ! ಹೀಗಿದ್ದ ಮೇಲೆ ಅದೋನೀಯನು ಆಳುವದೇಕೆ ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು. ಅಧ್ಯಾಯವನ್ನು ನೋಡಿ |