Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನು ಬಹು ವೃದ್ಧನಾಗಿದ್ದದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಬತ್ಷೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಯುವತಿಯಾದ ಅಬೀಷಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:15
4 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.


ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು.


ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು