Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅವನ ಸೇವಕರು ಅವನಿಗೆ - ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕತಕ್ಕದ್ದು; ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ಅವನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಮಗ್ಗುಲಲ್ಲಿ ಮಲಗುವದಾದರೆ ಅವನಿಗೆ ಬೆಚ್ಚಗಾಗುವದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅವನ ಸೇವಕರು ಅವನಿಗೆ, “ನಾವು ನಿನ್ನ ಆರೈಕೆಗಾಗಿ ಒಬ್ಬ ಯುವಕನ್ನಿಕೆಯನ್ನು ಹುಡುಕುವೆವು. ಅವಳು ನಿನ್ನನ್ನು ಒತ್ತರಿಸಿಕೊಂಡು ಮಲಗಿ ಬೆಚ್ಚಗಿಡುತ್ತಾಳೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:2
11 ತಿಳಿವುಗಳ ಹೋಲಿಕೆ  

ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.


ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.


ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.


ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು