Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:31 - ಕನ್ನಡ ಸಮಕಾಲಿಕ ಅನುವಾದ

31 ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಗ ಬತ್ಷೆಬೆಳು ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು. ಅವಳು, “ರಾಜನಾದ ದಾವೀದನು ಚಿರಾಯುವಾಗಿರಲಿ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:31
14 ತಿಳಿವುಗಳ ಹೋಲಿಕೆ  

ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!


ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.


ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.


ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.


ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.


ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.


ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು