1 ಅರಸುಗಳು 1:41 - ಕನ್ನಡ ಸಮಕಾಲಿಕ ಅನುವಾದ41 ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆ ಸಮಯಕ್ಕೆ ಅದೋನೀಯನು ಮತ್ತು ಅವನೊಂದಿಗಿದ್ದ ಅತಿಥಿಗಳು ಊಟವನ್ನು ಮುಗಿಸುತ್ತಿದ್ದರು. ಅವರಿಗೆ ತುತ್ತೂರಿಯ ಶಬ್ದವು ಕೇಳಿಸಿತು. ಯೋವಾಬನು, “ಆ ಶಬ್ದವು ಏನು? ನಗರದಲ್ಲಿ ಏನು ನಡೆಯುತ್ತಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |