Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:8
17 ತಿಳಿವುಗಳ ಹೋಲಿಕೆ  

ಏಲನ ಮಗ ಶಿಮ್ಮಿಯು ಬೆನ್ಯಾಮೀನ್ ಪ್ರಾಂತದಲ್ಲಿ ಅಧಿಕಾರಿ.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.


ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.


ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.


ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.


ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು