Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:11 - ಕನ್ನಡ ಸಮಕಾಲಿಕ ಅನುವಾದ

11 ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀರಾಮನ ಹಡಗುಗಳು ಓಫೀರ್‍ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಆ ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:11
9 ತಿಳಿವುಗಳ ಹೋಲಿಕೆ  

ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.


ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು.


“ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು.


ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.


ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.


ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.


“ಆದ್ದರಿಂದ ಬಂಗಾರದಲ್ಲಿಯೂ, ಬೆಳ್ಳಿಯಲ್ಲಿಯೂ, ಕಂಚಿನಲ್ಲಿಯೂ, ಕಬ್ಬಿಣದಲ್ಲಿಯೂ, ರಕ್ತವರ್ಣ, ಲೋಹಿತ ವರ್ಣ, ನೀಲ ವರ್ಣಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನನ್ನು, ನನ್ನ ತಂದೆ ದಾವೀದನು ಸಿದ್ಧಮಾಡಿದ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ನನ್ನ ಬಳಿಯಲ್ಲಿರುವ ಕುಶಲಕರ್ಮಿಗಳ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿ ಇರುವವನನ್ನು ನನ್ನ ಬಳಿಗೆ ಕಳುಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು