Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲವಾದದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:21
9 ತಿಳಿವುಗಳ ಹೋಲಿಕೆ  

ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.


ಅವನು ಲೆಬನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು 44 ಮೀಟರ್ ಉದ್ದ, 22 ಮೀಟರ್ ಅಗಲ, 13.5 ಮೀಟರ್ ಎತ್ತರವೂ ಆಗಿತ್ತು. ಅದು ನಾಲ್ಕು ಸಾಲು ದೇವದಾರು ಕಂಬಗಳ ಮೇಲೆ ಇತ್ತು. ದೇವದಾರು ತೊಲೆಗಳು ಕಂಬಗಳ ಮೇಲೆ ಇದ್ದವು.


ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.


ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.


ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.


ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು