Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 10:28 - ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂ ಪ್ರದೇಶಗಳಿಂದ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂ ಪ್ರಾಂತ್ಯದಿಂದ ಇಸ್ರೇಲಿಗೆ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 10:28
10 ತಿಳಿವುಗಳ ಹೋಲಿಕೆ  

ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.


ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.


ನಯವಾದ ನಾರಿನ ಕೆಲಸದವರು ಬಟ್ಟೆ ನೇಯುವವರು ನಿರಾಶರಾಗಿರುವರು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು