1 ಅರಸುಗಳು 10:5 - ಕನ್ನಡ ಸಮಕಾಲಿಕ ಅನುವಾದ5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಅರಸನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು. ಅಧ್ಯಾಯವನ್ನು ನೋಡಿ |
ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.