Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:13 - ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:13
32 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.


ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.


ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.


ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು