1 ಅರಸುಗಳು 11:14 - ಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರೋಧವಾಗಿ ಏಳಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು. ಅಧ್ಯಾಯವನ್ನು ನೋಡಿ |
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.