1 ಅರಸುಗಳು 11:18 - ಕನ್ನಡ ಸಮಕಾಲಿಕ ಅನುವಾದ18 ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಮೊದಲು ವಿುದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಅಶನವನ್ನು ನೇವಿುಸಿ ಮನೆಯನ್ನೂ ಭೂವಿುಯನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |