Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:19 - ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದದರಿಂದ ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:19
8 ತಿಳಿವುಗಳ ಹೋಲಿಕೆ  

ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.


ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.


ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.


ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು.


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು