1 ಅರಸುಗಳು 11:2 - ಕನ್ನಡ ಸಮಕಾಲಿಕ ಅನುವಾದ2 ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, “ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು” ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲ್ಯರಿಗೆ - ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ನಡೆಯಬಾರದು; ಅದು ನಡೆಯುವದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಮೊದಲೇ ಇಸ್ರೇಲಿನ ಜನರಿಗೆ, “ಅನ್ಯದೇಶದ ಸ್ತ್ರೀಯರನ್ನು ನೀವು ಮದುವೆಯಾಗಲೇಬಾರದು. ನೀವು ಅವರನ್ನು ಮದುವೆಯಾದರೆ, ತಮ್ಮ ದೇವರುಗಳನ್ನು ಅನುಸರಿಸುವಂತೆ ಅವರು ನಿಮ್ಮನ್ನು ಪ್ರೇರೇಪಿಸುತ್ತಾರೆ” ಎಂದು ಹೇಳಿದ್ದನು. ಆದರೆ ಸೊಲೊಮೋನನು ಈ ಸ್ತ್ರೀಯರನ್ನು ಪ್ರೀತಿಸತೊಡಗಿದನು. ಅಧ್ಯಾಯವನ್ನು ನೋಡಿ |