1 ಅರಸುಗಳು 11:26 - ಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅರಸನಾದ ಸೊಲೊಮೋನನಿಗೆ ವಿರೋಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನೂ ಆಗಿದ್ದ ಯಾರೊಬ್ಬಾಮನೆಂಬವನು ಮತ್ತೊಬ್ಬನು; ಚೆರೂಗಳೆಂಬ ವಿಧವೆಯು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿ |
ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.