Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:28 - ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದ್ದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:28
13 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.


ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.


ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.


ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.


ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.


ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು