1 ಅರಸುಗಳು 11:34 - ಕನ್ನಡ ಸಮಕಾಲಿಕ ಅನುವಾದ34 “ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿವಿುತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದ್ದರಿಂದ ನಾನು ಸೊಲೊಮೋನನ ಕುಟುಂಬದಿಂದ ರಾಜ್ಯವನ್ನು ತೆಗೆದುಕೊಳ್ಳುತ್ತೇನೆ. ಆದರೆ ಸೊಲೊಮೋನನು ತನ್ನ ಜೀವಮಾನವೆಲ್ಲಾ ಆಳುವಂತೆ ನಾನು ಅವನಿಗೆ ಅವಕಾಶ ಕೊಡುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗಾಗಿ ಇದನ್ನು ಮಾಡುತ್ತೇನೆ. ನಾನು ದಾವೀದನನ್ನು ಆರಿಸಿಕೊಂಡೆನು; ಏಕೆಂದರೆ ಅವನು ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಅನುಸರಿಸಿದನು. ಅಧ್ಯಾಯವನ್ನು ನೋಡಿ |