Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:36 - ಕನ್ನಡ ಸಮಕಾಲಿಕ ಅನುವಾದ

36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:36
25 ತಿಳಿವುಗಳ ಹೋಲಿಕೆ  

ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.


ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.”


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಯೆಹೋವ ದೇವರೇ, ನನ್ನ ದೀಪವು ನೀವೇ; ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.


ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ.


ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.


ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು