38 ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.
38 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.
38 ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.
38 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಾಯೇಲ್‍ರಾಜ್ಯವು ನಿನ್ನ ಪಾಲಾಗುವದು.
38 ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.
ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.
“ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ,
ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.
ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.