Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:40 - ಕನ್ನಡ ಸಮಕಾಲಿಕ ಅನುವಾದ

40 ಇದರ ನಿಮಿತ್ತ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಹುಡುಕಿದನು. ಆದ್ದರಿಂದ ಯಾರೊಬ್ಬಾಮನು ಎದ್ದು, ಈಜಿಪ್ಟಿನ ಅರಸನಾದ ಶೀಶಕನ ಬಳಿಗೆ ಈಜಿಪ್ಟಿಗೆ ಓಡಿಹೋಗಿ, ಸೊಲೊಮೋನನು ಸಾಯುವವರೆಗೂ ಅಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು, ಈಜಿಪ್ಟಿನ ಅರಸ ಶೀಶಕನ ಬಳಿಗೆ ಹೋಗಿ, ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:40
11 ತಿಳಿವುಗಳ ಹೋಲಿಕೆ  

ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.


ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.


ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.


ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು