Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:5 - ಕನ್ನಡ ಸಮಕಾಲಿಕ ಅನುವಾದ

5 ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:5
14 ತಿಳಿವುಗಳ ಹೋಲಿಕೆ  

ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು