21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
21 ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
21 ರೆಹಬ್ಬಾಮನು ಜೆರುಸಲೇಮಿಗೆ ಹಿಂದಿರುಗಿ ಹೋದನು. ಅವನು ಯೆಹೂದದ ಕುಟುಂಬಗಳನ್ನು ಮತ್ತು ಬೆನ್ಯಾಮೀನ್ ಕುಟುಂಬಗಳನ್ನು ಒಟ್ಟಾಗಿ ಸೇರಿಸಿದನು. ಅವರಲ್ಲಿ ಒಂದು ಲಕ್ಷದ ಎಂಭತ್ತು ಸಾವಿರ ಸೈನಿಕರಿದ್ದರು. ರೆಹಬ್ಬಾಮನು ಇಸ್ರೇಲಿನ ಜನರ ವಿರುದ್ಧ ಯುದ್ಧಮಾಡಲು ಅಪೇಕ್ಷಿಸಿದನು. ಅವನು ತನ್ನ ರಾಜ್ಯವನ್ನು ಪುನರ್‌ಸ್ಥಾಪಿಸಬೇಕೆಂದಿದ್ದನು.
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.
ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.
ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.