Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:25 - ಕನ್ನಡ ಸಮಕಾಲಿಕ ಅನುವಾದ

25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:25
15 ತಿಳಿವುಗಳ ಹೋಲಿಕೆ  

ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.


ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.


ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.


ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.


ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.


ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.


ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು