Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:27 - ಕನ್ನಡ ಸಮಕಾಲಿಕ ಅನುವಾದ

27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಜನರು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಾರ್ಪಣೆಗಾಗಿ ಹೋಗುವದಾದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗೀತು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:27
14 ತಿಳಿವುಗಳ ಹೋಲಿಕೆ  

ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.


ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.


ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


“ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,


ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.


ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು