Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:31 - ಕನ್ನಡ ಸಮಕಾಲಿಕ ಅನುವಾದ

31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ ಲೇವಿಯರಲ್ಲದ ಕನಿಷ್ಠ ಜನರನ್ನೂ ಯಾಜಕರನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾರೊಬ್ಬಾಮನು ಎತ್ತರದ ಸ್ಥಳಗಳಲ್ಲಿ ಆಲಯಗಳನ್ನು ನಿರ್ಮಿಸಿದನು. ಅವನು ಇಸ್ರೇಲಿನ ಬೇರೆಬೇರೆ ಕುಲಗಳಿಂದ ಯಾಜಕರನ್ನು ಆರಿಸಿಕೊಂಡನು. (ಅವನು ಲೇವಿಯರ ಕುಲವೊಂದರಿಂದಲೇ ಯಾಜಕರನ್ನು ಆರಿಸಿಕೊಳ್ಳಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:31
14 ತಿಳಿವುಗಳ ಹೋಲಿಕೆ  

ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.


ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.


ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.


ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.


ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು