Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:1 - ಕನ್ನಡ ಸಮಕಾಲಿಕ ಅನುವಾದ

1 ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:1
23 ತಿಳಿವುಗಳ ಹೋಲಿಕೆ  

ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.


ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.


ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.


ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.


ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು.


ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.


ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.


ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.


ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.


ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?


ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.


ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು