Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:14 - ಕನ್ನಡ ಸಮಕಾಲಿಕ ಅನುವಾದ

14 ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. ಅದಕ್ಕವನು, “ನಾನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ದೈವಭಕ್ತನ ಹಿಂದೆಯೇ ಹೋಗಿ ಏಲಾವೃಕ್ಷದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ಜುದೇಯದಿಂದ ಬಂದ ದೈವಭಕ್ತನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಏಲಾವೃಕ್ಷದ ಕೆಳಗೆ ಕೂತಿರುವ ಅವನನ್ನು ಕಂಡು - ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ ಎಂದು ಕೇಳಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಪ್ರವಾದಿಯು ದೇವಮನುಷ್ಯನನ್ನು ಹಿಂಬಾಲಿಸಿ ಹೋಗಿ ಓಕ್ ಮರದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ನೀನು ಯೆಹೂದದಿಂದ ಬಂದ ದೇವಮನುಷ್ಯನೋ?” ಎಂದು ಕೇಳಿದನು. ದೇವಮನುಷ್ಯನು, “ಹೌದು, ನಾನೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:14
9 ತಿಳಿವುಗಳ ಹೋಲಿಕೆ  

ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ,


ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು