Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 13:32 - ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರೋಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರೋಧವಾಗಿಯೂ ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 13:32
11 ತಿಳಿವುಗಳ ಹೋಲಿಕೆ  

ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.


ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.


ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.


ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು