1 ಅರಸುಗಳು 14:10 - ಕನ್ನಡ ಸಮಕಾಲಿಕ ಅನುವಾದ10 “ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಾಯೇಲ್ಯರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು; ಅವರು ನಿರ್ನಾಮವಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.