Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:15 - ಕನ್ನಡ ಸಮಕಾಲಿಕ ಅನುವಾದ

15 ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:15
32 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.


ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.


ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.


ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?


ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.


ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.


“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.


ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.


ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು