Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 14:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 14:16
36 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.


ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.


ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು.


ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.


ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.


ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.


ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ.


ಅವನು ತನ್ನ ಪಿತೃಗಳು ಮಾಡಿದ ಪ್ರಕಾರ, ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.


ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು