Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರ ಅರಸನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದದ ವಿರುದ್ಧವಾಗಿ ಬಾಷನು ಹೋರಾಡಿದನು. ಆಸನ ದೇಶವಾದ ಯೆಹೂದದಿಂದ ಜನರು ಬರುವುದನ್ನೂ ಹೋಗುವುದನ್ನೂ ನಿಲ್ಲಿಸಲು ಬಾಷನು ಇಚ್ಛಿಸಿದನು. ಆದ್ದರಿಂದ ಅವನು ರಾಮ ನಗರವನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:17
10 ತಿಳಿವುಗಳ ಹೋಲಿಕೆ  

ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.


ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್,


ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.


ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು