Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:28 - ಕನ್ನಡ ಸಮಕಾಲಿಕ ಅನುವಾದ

28 ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬಾಷನು ಯೆಹೂದದ ಅರಸನಾದ ಆಸನ ಆಳಿಕೆಯ ಮೂರನೆಯ ವರುಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:28
5 ತಿಳಿವುಗಳ ಹೋಲಿಕೆ  

ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.


ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು