Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 15:34 - ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಬಾಷನು ಮಾಡಿದನು. ತನಗಿಂತ ಮುಂಚೆ ಆಳಿದ ಇಸ್ರೇಲಿನ ರಾಜನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 15:34
7 ತಿಳಿವುಗಳ ಹೋಲಿಕೆ  

ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.


ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.


“ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು