1 ಅರಸುಗಳು 16:10 - ಕನ್ನಡ ಸಮಕಾಲಿಕ ಅನುವಾದ10 ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಜಿಮ್ರಿಯು ಅಲ್ಲಿಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು. ಅಧ್ಯಾಯವನ್ನು ನೋಡಿ |