1 ಅರಸುಗಳು 16:13 - ಕನ್ನಡ ಸಮಕಾಲಿಕ ಅನುವಾದ13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿ |