1 ಅರಸುಗಳು 16:15 - ಕನ್ನಡ ಸಮಕಾಲಿಕ ಅನುವಾದ15 ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಾಯೇಲ್ಯರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು. ಅಧ್ಯಾಯವನ್ನು ನೋಡಿ |