Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:19 - ಕನ್ನಡ ಸಮಕಾಲಿಕ ಅನುವಾದ

19 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದದರಿಂದ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:19
10 ತಿಳಿವುಗಳ ಹೋಲಿಕೆ  

ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.


ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.


ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.


ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು