Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:3 - ಕನ್ನಡ ಸಮಕಾಲಿಕ ಅನುವಾದ

3 ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನ್ನ ಮನೆಗೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:3
8 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.


ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.


ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು