Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:6 - ಕನ್ನಡ ಸಮಕಾಲಿಕ ಅನುವಾದ

6 ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಏಲನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಏಲನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:6
8 ತಿಳಿವುಗಳ ಹೋಲಿಕೆ  

ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು.


ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು.


ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.


ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.


ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.


ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು