Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದ್ಯರ ಅರಸನಾದ ಆಸನ ಆಳಿಕೆಯ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲ್ಯರ ಅರಸನಾಗಿ ಎರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:8
12 ತಿಳಿವುಗಳ ಹೋಲಿಕೆ  

ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.


ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.


ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು.


ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.


ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು.


ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.


ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು