Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 16:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರೋಧವಾಗಿ ಒಳಸಂಚುಮಾಡಿದನು. ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 16:9
28 ತಿಳಿವುಗಳ ಹೋಲಿಕೆ  

ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.


ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.


ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.


ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.


ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.


ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.


ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.


ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.


ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.


ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು